June 18, 2021

ಪೆಟ್ರೋಲಿಯಂ ಉತ್ಪನ್ನಗಳು &ಡೀಸೆಲ್ ಬೆಲೆ ಏರಿಕೆ; ಹಾವೇರಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿ ವತಿಯಿಂದ ಪ್ರತಿಭಟನೆ.!

ಹಾವೇರಿ- ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳು &ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಹಾವೇರಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ ಅಧ್ಯಕ್ಷ ಪ್ರಸನ್ನ ಹಿರೇಮಠ್ ಮಾತನಾಡಿ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲಿಯಂ ಉತ್ಪನ್ನ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದ್ದು ಇದರಿಂದ ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ತೊಂದರೆಯಾಗಿದೆ. ಹಾಗೂ ತೈಲ ಬೆಲೆ ಏರಿಕೆಯಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ ಇದರಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ದುಸ್ತರವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಬೇಕೆಂದು ಪ್ರತಿಭಟನೆ ಮುಖಾಂತರ ಆಗ್ರಹಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷರಾದ ಬಸವರಾಜ್ ಮಾಳಗಿ, ಹಾವೇರಿ ಶಹರ ಬ್ಲಾಕ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷರಾದ ಉಮರ ಇನಾಮದಾರ, ಸುಲೇಮಾನ ಜಮಾದಾರ, ರವಿ ಕತ್ತಿ ಮಲ್ಲೇಶ್ ಮಾಳಗಿ ತೌಸೀಫ್ ಕರ್ಜಗಿ ಇನ್ನಿತರರು ಉಪಸ್ಥಿತರಿದ್ದರು.

Share this News
error: Content is protected !!