June 13, 2021

ರೈತರ ಪ್ರತಿಭಟನೆ; ಕೃಷಿ ಕಾಯ್ದೆ ವಿರೋಧಿಸಿ ಜನಪ್ರತಿನಿಧಿಗಳ ಕಚೇರಿ ಮುಂದೆ ಪ್ರತಿಗಳನ್ನು ಸುಟ್ಟು ಆಕ್ರೋಶ.!

ಹಾವೇರಿ – ರೈತ ವಿರೋಧಿ ಕಾನೂನುಗಳನ್ನ ವಾಪಸ್ಸು ಪಡೆಯುವಂತೆ ಒತ್ತಾಯಿಸಿ ದೆಹಲಿ ರೈತರ ಹೋರಾಟ ಬೆಂಬಲಿಸಿ ಹಾವೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಯ ರೈತರು ಶಾಸಕರು ಹಾಗೂ ಸಂಸದ ಶಿವಕುಮಾರ್ ಉದಾಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಹಾವೇರಿ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಇರುವ ಸಂಸದ ಶಿವಕುಮಾರ್ ಉದಾಸಿ, ಶಾಸಕ ನೆಹರು ಓಲೇಕಾರ ಹಾಗೂ ವಿರೂಪಾಕ್ಷಪ್ಪ ಬಳ್ಳಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ , ರೈತ ವಿರೋಧಿ ಕಾನೂನಿನ ಕರಪತ್ರಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ರೈತರು ಕಳೆದ ಆರು ತಿಂಗಳನಿಂದ ರೈತರ ವಿರೋಧಿ ಕಾನೂನುಗಳನ್ನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.‌ ಕೇಂದ್ರ ಸರ್ಕಾರದ ಮಾತ್ರ ಮಾತುಕತೆ ನಡೆಸಿ ರೈತರ ವಿರೋಧಿ ಕಾನೂನುಗಳನ್ನ ರದ್ದು ಮಾಡುತ್ತಿಲ್ಲ. ರೈತರ ಉತ್ಪನ್ನ ಮಾರಾಟ ಹಾಗೂ ವಾಣಿಜ್ಯ ಕಾನೂನು, ಬೆಲೆ ಭರವಸೆ ಹಾಗೂ ಕೃಷಿ ಸೇವೇಗಳ ಕುರಿತ ರೈತ (ಸಶಕ್ತೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಕಾಯ್ದೆ 2020. ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ 2020, ವಿದ್ಯುತ್ ಮಸೂದೆ , ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ 2020,ಕರ್ನಾಟಕ ಎಪಿಎಂಸಿ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ 2020 ರ ಪ್ರತಿಗಳನ್ನು ಸುಟ್ಟು ಕ್ರಾಂತಿ ದಿನಾಚರಣೆ ಆಚರಣೆ ಮಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋದಿ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಸರ್ಕಾರ ಸ್ವಾಮಿನಾಥನ್ ವರದಿ ಜಾರಿಗೆ ಮಾಡಬೇಕು, MSP ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಕೊಡಬೇಕೆಂದು ಸರ್ಕಾರ ವನ್ನು ಒತ್ತಾಯಿಸಿದರು.

Share this News
error: Content is protected !!