June 18, 2021

ಲಾಕ್‍ಡೌನ್ ಅವಧಿಯಲ್ಲಿ ಬಲವಂತ ಸಾಲ ವಸೂಲಿ ಬೇಡ; ಹಾವೇರಿ ಜಿಲ್ಲಾಧಿಕಾರಿಗಳಿಂದ ಹಣಕಾಸು ಸಂಸ್ಥೆಗಳಿಗೆ ಖಡಕ್ ಎಚ್ಚರಿಕೆ.!

ಹಾವೇರಿ: ಕೋವಿಡ್ ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಸರ್ಕಾರದಿಂದ ಲಾಕ್‍ಡೌನ್ ಆದೇಶ ಜಾರಿಗೊಳಿಸಲಾಗಿದೆ. ಹಲವು ಉದ್ಯಮಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನರು ಪಡೆದ ಸಾಲವನ್ನು ಹಾಗೂ ಸಾಲದ ಕಂತುಗಳ ಪಾವತಿಗೆ ಸಮಯಾವಕಾಶ ನೀಡಬೇಕು. ಬಲವಂತ ಮಾಡದಂತೆ ಸರ್ಕಾರಿ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಂಜಯ ಶೆಟ್ಟೆಣ್ಣವರ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಲಾಕ್‍ಡೌನ್ ಪರಿಣಾಮ ಅಪಾರ ಸಂಖ್ಯೆಯಲ್ಲಿ ಉದ್ಯಮಗಳು ಸ್ಥಗಿತಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರು, ಜನಸಾಮಾನ್ಯರು, ಶ್ರಮಿಕ ವರ್ಗದವರು ಸೇರಿದಂತೆ ವಿವಿಧ ಸಮುದಾಯ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸರ್ಕಾರಿ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಪಡೆದ ಸಾಲವನ್ನು ಮರುಪಾವತಿ ಮಾಡಲು ಕಷ್ಟಸಾಧ್ಯವಾಗುತ್ತದೆ.

ವಿವಿಧ ಹುದ್ದೆಗಳಿಗೆ ಸರಕಾರ ಹೊರಡಿಸಿರುವ ನೇಮಕಾತಿ ಆದೇಶ ನೋಡಲು ಇಲ್ಲಿ click ಮಾಡಿ

ಇಂತಹ ಸಂಕಷ್ಟ ಸಂದರ್ಭದಲ್ಲಿ ಸಾಲ ವಸೂಲು ಮಾಡುವ ಹಣಕಾಸು ಸಂಸ್ಥೆಗಳು ನೌಕರರು, ಜನರೊಂದಿಗೆ ಅನುಚಿತವಾಗಿ ವರ್ತಿಸದೇ ಬಲವಂತ ಮಾಡದೇ ಸಾಲ ಕಟ್ಟುವ ಸಾಮಥ್ಯವನ್ನು ಗಮನದಲ್ಲಿಟ್ಟುಕೊಂಡು ಕಂತುಗಳಲ್ಲಿ ಸಾಲ ಮರುಪಾವತಿಗೆ ಅವಕಾಶ ನೀಡಬೇಕು. ಸಾಧ್ಯವಾದಲ್ಲಿ ಲಾಕ್‍ಡೌನ್ ಮುಗಿದ ನಂತರ ಮರುಪಾವತಿ ಮಾಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

Share this News
error: Content is protected !!