June 18, 2021

DEATH COMPENSATION| ಕ್ಷೇತ್ರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ, ಬಸವರಾಜ ಬೊಮ್ಮಾಯಿಯವರಿಂದ 25ಸಾವಿರ ರೂ ಪರಿಹಾರ ವಿತರಣೆ.!

ಹಾವೇರಿ – ಜಿಲ್ಲೆಯ ಶಿಗ್ಗಾಂವಿ ಮತ್ತು ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ವೈಯುಕ್ತಿಕವಾಗಿ 25 ಸಾವಿರ ರೂಪಾಯಿಗಳ ಪರಿಹಾರವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿತರಣೆ ಮಾಡಿದರು.

ಇವತ್ತು ತಮ್ಮ ನಿವಾಸದ ಪಕ್ಕದಲ್ಲೇ ಇರುವ ಕೊವೀಡ್ ಕೇರ್ ಸೆಂಟರ್ ಗೆ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಹಾಗೂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದರು. ಕೊರೋನಾ ಎರಡನೇಯ ಅಲೆಯಲ್ಲಿ ಶಿಗ್ಗಾಂವಿ ಮತ್ತು ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ 25 ಸಾವಿರ ರೂಪಾಯಿಗಳನ್ನು ವೈಯುಕ್ತಿಕವಾಗಿ ವಿತರಣೆ ಮಾಡುತ್ತೇನೆ ಎಂದು ಇವತ್ತು ಸಾಂಕೇತಿಕವಾಗಿ ಐದು ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿಗಳ ಪರಿಹಾರದ ಚೆಕ್ ವಿತರಣೆ ಮಾಡಿದರು.

ನಾಲ್ಕೈದು ದಿನಗಳಲ್ಲಿ ಸೋಂಕಿನಿಂದ ಮೃತಪಟ್ಟ ಎಲ್ಲಾ ಕುಟುಂಬಗಳಿಗೆ ವೈಯುಕ್ತಿಕವಾಗಿ ಪರಿಹಾರ ಮುಟ್ಟಿಸುವ ಕಾರ್ಯ ಮಾಡುತ್ತೇನೆ ಎಂದರು. ಜೊತೆಗೆ ಆಶಾಕಾರ್ಯಕರ್ತೆಯರಿಗೆ, ಆಸ್ಪತ್ರೆಯ ಸಿಬ್ಬಂದಿ, ಡಿ.ದರ್ಜೆಯ ನೌಕರರು ಸೇರಿದಂತೆ ಕೊರೋನಾ ವಾರಿಯರ್ಸ್‌ ಗೆ ಇನ್ನೊಂದು ವೈದ್ಯಕೀಯ ಕಿಟ್ ಹಾಗೂ ಆಹಾರ ಕಿಟ್ ಒದಗಿಸುತ್ತೇನೆ. ಕೊರೋನಾ ವಾರಿಯರ್ಸ್‌ ಗಳಿಗೆ ದಿವಂಗತ ಶ್ರೀಮತಿ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಆರೋಗ್ಯ ವಿಮೆ ಮಾಡಿಸುತ್ತೇನೆ. ಕೊರೋನಾ ಸಂದರ್ಭದಲ್ಲಿ ಕೆಲಸ‌ ಮಾಡಿದ ವಾರಿಯರ್ಸ್‌ ಗೆ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ವಿಮೆ ಅನುಕೂಲಕರವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Share this News
error: Content is protected !!