June 18, 2021

CM UDASI| ಹಾನಗಲ್ ಅಜ್ಜನ ಬಗ್ಗೆ ನಿಮಗೆಷ್ಟು ಗೊತ್ತು? ಭತ್ತದ ವ್ಯಾಪಾರಿಯೊಬ್ಬ, ದಿವಂಗತ ಜೆ.ಎಚ್.ಪಟೇಲ ಸಂಪುಟದಲ್ಲಿ ಸಚಿವರಾದ ರೋಚಕ ಕಥೆ.!

ಹಾವೇರಿ- ಜಿಲ್ಲೆಯ ಹಾನಗಲ್ ವಿಧಾನಸಭಾ ಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ ಶ್ರೀ ಸಿ.ಎಮ್. ಉದಾಸಿಯವರು ಆನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ವಯೋ ಸಹಜ ಖಾಯಿಲೆ ಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2.47ಕ್ಕೆ ಅಸುನೀಗಿದ್ದಾರೆ. ಹಿರಿಯ ರಾಜಕಾರಣಿಗಳಾದ ಹಾಲಿ ಶಾಸಕರಾದ ಸಿ.ಎಮ್. ಉದಾಸಿಯವರ ನಿಧನಕ್ಕೆ ಸಿ.ಎಮ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೆ.ಎಸ್. ಈಶ್ವರಪ್ಪ ಮುಂತಾದ ಸಚಿವರು ಸಂತಾಪ ಸೂಚಿಸಿದ್ದಾರೆ.

ಸರಳ ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದ ಉದಾಸಿ ಅಜ್ಜನ ಬಗ್ಗೆ ಒಂದಿಷ್ಟು ಮಾಹಿತಿಗಳು ಇಲ್ಲಿವೆ..

*ಪೂರ್ತಿ ಹೆಸರು ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ.

* ಫೆಬ್ರುವರಿ 2,1937ರಲ್ಲಿ ಜನನ

* ಸಾವಿತ್ರಮ್ಮ ಮತ್ತು ಮಹಾಲಿಂಗಪ್ಪ ದಂಪತಿಯ ಪುತ್ರ.

*ವಯಸ್ಸು : 85 ವರ್ಷ.

*ಓದಿದ್ದು ಎಂಟನೆ ತರಗತಿ.

*ಪತ್ನಿ ನೀಲಮ್ಮ(ನೀಲಾಂಬಿಕಾ), ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ.

*ಹಾನಗಲ್ ಪಟ್ಟಣದ ಗೌಳಿಗಲ್ಲಿ ನಿವಾಸಿ.

*ಪುತ್ರ ಶಿವಕುಮಾರ ಉದಾಸಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

*ಸಿ.ಎಂ.ಉದಾಸಿ ಒಟ್ಟು ಆರು ಬಾರಿ ಶಾಸಕರಾಗಿದ್ದರು.

*1974ರಲ್ಲಿ ಹಾನಗಲ್ ಪುರಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆ.

*1974ರಿಂದ 1980ರವರೆಗೆ ಪುರಸಭೆ ಅಧ್ಯಕ್ಷರಾಗಿ ಕೆಲಸ.

*1983ರಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.

*1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎರಡನೆ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದರು.

* 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

*1994ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಮೂರನೆ ಬಾರಿಗೆ ಶಾಸಕರಾಗಿದ್ದರು.

*1999ರಲ್ಲಿ ಜೆಡಿಯುನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

*2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

*2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

*2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆರನೆ ಬಾರಿಗೆ ಗೆಲುವು ಸಾಧಿಸಿದ್ದರು.

*ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ.

*1994ರಲ್ಲಿ ದಿವಂಗತ ಜೆ.ಎಚ್.ಪಟೇಲ್ ರ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು.

* 2004ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕೆಲಸ.

* ಜವಳಿ ಸಚಿವರಾಗಿ ಮತ್ತು‌ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ.

ಶ್ರೀ ಯುತ ಸಿ.ಎಮ್ ಉದಾಸಿಯವರು ರಾಜಕೀಯಕ್ಕೆ ಬರುವ ಮೊದಲು ಭತ್ತದ ವ್ಯಾಪಾರ ಮಾಡುತ್ತಿದ್ದರು. ನಂತರ ಹಾನಗಲ್ ಪಟ್ಟಣದಲ್ಲಿ ರೈಸ್ ಮಿಲ್ ಆರಂಭಿಸಿದರು. ಅದಾದ ನಂತರ ಹಿರಿಯರ ಒತ್ತಾಯಕ್ಕೆ ಮಣಿದು ಪುರಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ರಾಜಕೀಯ ಪ್ರವೇಶ‌ ಮಾಡಿದ್ದರು.

Share this News
error: Content is protected !!