July 25, 2021

COVID19 BREAKING| ಕೊರೋನಾಕ್ಕೆ ಪೊಲೀಸ್ ಹೆಡ್ ಕಾನಸ್ಟೇಬಲ್ ಬಲಿ.!

ಹಾವೇರಿ – ಕೊರೋನಾ ಸೋಂಕಿಗೆ 45 ವರ್ಷದ ಪೊಲೀಸ್ ಹೆಡ್ ಕಾನಸ್ಟೇಬಲ್ ಮೃತಪಟ್ಟ ಘಟನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹಾವೇರಿಯ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಹೆಡ್ ಕಾನಸ್ಟೇಬಲ್ ಕಳೆದ 23 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಕೊರೋನಾ ಸೋಂಕು ದೃಡಪಟ್ಟು ಜಿಲ್ಲಾಸ್ಪತ್ರೆಯಲ್ಲಿ ಹೆಡ್ ಕಾನಸ್ಟೇಬಲ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್ ಹೆಡ್ ಕಾನಸ್ಟೇಬಲ್ ಮೃತಪಟ್ಟಿದ್ದಾರೆ. ಹೆಡ್ ಕಾನಸ್ಟೇಬಲ್ ಕೋವಿಡ್ ಗೆ ಮೃತಪಟ್ಟಿರೋದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ದೃಢಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಎರಡನೆ ಅಲೆಯಲ್ಲಿ ಒಟ್ಟು 37 ಜನ ಪೊಲೀಸ್ ಸಿಬ್ಬಂದಿ ಸೋಂಕು ಧೃಡಪಟ್ಟಿದೆ. ಅದರಲ್ಲಿ 19 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 18 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಓರ್ವ ಪೊಲೀಸ್ ಹೆಡ್ ಕಾನಸ್ಟೇಬಲ್ ಮೃತಪಟ್ಟಿದ್ದಾನೆ. ಕಳೆದ ತಿಂಗಳು ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಒಟ್ಟು ಕೊರೋನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ‌‌.

______

Share this News
error: Content is protected !!