July 25, 2021

ಕೋವಿಡ್ ಸೋಂಕಿನಿಂದ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣ ಅಧಿಕಾರಿ ಸಾವು.!

ಹಾವೇರಿ – ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿಗೆ ಕೊರೋನಾ ಸೋಂಕು ದೃಢಪಟ್ಟು ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತಪಟ್ಟ ತಾಲ್ಲೂಕು ಅಧಿಕಾರಿಯನ್ನು ಅನೀತಾ ಸುಂಕದ 43 ವರ್ಷ ವಯಸ್ಸು‌ ಎನ್ನಲಾಗಿದೆ.

ಮೃತ ಅನೀತಾ ಹಾವೇರಿ ತಾಲೂಕಿನ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಆಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಅನೀತಾಳಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕೊರೋನಾ ಸೋಂಕು ದೃಢಪಟ್ಟು ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಮೃತಪಟ್ಟ ಬಗ್ಗೆ ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ ಮಾಹಿತಿ ನೀಡಿದ್ದಾರೆ.

 

______

Share this News
error: Content is protected !!