July 25, 2021

FARMER SUCIDE| ಬೆಳೆದ ಬೆಳೆಗೆ ಸಿಗದ ಸರಿಯಾದ ಬೆಲೆ; ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ.!

ರಾಣೇಬೆನ್ನೂರು- ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿರುವುದು. ಮೃತ ರೈತನನ್ನು 38 ವರ್ಷದ ಜಯಪ್ಪ ಮಜ್ಜಿಚಿಕ್ಕಣ್ಣನವರ ಎಂದು ಗುರುತಿಸಲಾಗಿದೆ.

ಎರಡು ಎಕರೆ ಜಮೀನು ಹೊಂದಿದ್ದ ಮಂಜಪ್ಪ, ಕೊಳವೆ ಬಾವಿ ಕೊರೆಸಲು ಮತ್ತು ಕೃಷಿ ಕೆಲಸಕ್ಕೆ ಎಂದು ಎರಡೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ತನ್ನ ಜಮೀನಿನಲ್ಲಿ ತರಕಾರಿ, ಮೆಕ್ಕೆಜೋಳ ಬೆಳೆ ಬೆಳೆದಿದ್ದ ರೈತ, ನಿರೀಕ್ಷೆಯಂತೆ ಉತ್ತಮ ಬೆಳೆ ಮತ್ತು ಬೆಳೆದ ಬೆಳೆಗೆ ಸರಿಯಾದ ಬೆಲೆ ಬಾರದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇವತ್ತು ಬೆಳಗಿನ ಜಾವ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

Share this News
error: Content is protected !!