July 25, 2021

ಉಚಿತವಾಗಿ ತ್ರಿಚಕ್ರ ವಾಹನ ವಿತರಣೆ: ವಿಕಲಚೇತನರಿಗೆ ಅನುಕಂಪದ ಬದಲು ಸರ್ಕಾರದ ಸೌಲಭ್ಯ ತಲುಪಿಸಬೇಕು. -ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ.

ಹಾನಗಲ್- ವಿಧಾನ ಪರಿಷತ್ ಸದಸ್ಯರಾದ ಶ್ರೀ ಶ್ರೀನಿವಾಸ ಮಾನೆ ಅವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅಡಿಯಲ್ಲಿ ಬರುವ ಅನುದಾನದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಹಾನಗಲ್ ನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 79 ವಿಕಲಚೇತನ ಫಲಾನಿಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತಾನಾಡಿದ ಶ್ರೀನಿವಾಸ ಮಾನೆಯವರು, ವಿಕಲಚೇತನ ಬಂದುಗಳಿಗೆ ಅನುಕಂಪ ತೋರುವ ಬದಲು ಸರಕಾರದಿಂದ ದೊರುಕುವ ಸೌಲಭ್ಯಗಳನ್ನು ತಲುಪಿಸಬೇಕು. ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದರೆ ಖಂಡಿತವಾಗಿಯೂ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ತಲುಪಲು ಸಹಾಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಸ್ಥಳೀಯ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Share this News
error: Content is protected !!