July 25, 2021

ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರ; ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್.!

ಹಾವೇರಿ- ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದ ತೆರವಾದ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಗೂ ಮುನ್ನವೆ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ‌ ನೇತೃತ್ವದಲ್ಲಿ ಕೆಲವು ಕಾಂಗ್ರೆಸ್ ಕಾರ್ಯರ್ತರು ಮತ್ತು ಮುಖಂಡರು ನಿನ್ನೆ ಸಭೆ ನಡೆಸಿದ್ದಾರೆ.

ಹಾನಗಲ್ ತಾಲೂಕಿನವರಿಗೆ ಪಕ್ಷದ ಟಿಕೆಟ್ ನೀಡುವಂತೆ ಸಭೆಯಲ್ಲಿ ಒತ್ತಾಯ ಮಾಡಿದ್ದು, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಪಕ್ಷದ ಟಿಕೆಟ್‌ ನೀಡದಂತೆ ಪರೋಕ್ಷವಾಗಿ ಒತ್ತಾಯ ಮಾಡಿದ್ದಾರೆ. ಹಾನಗಲ್ ತಾಲೂಕಿನ ಯಾರಿಗಾದರೂ ಟಿಕೆಟ್ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ನಿರ್ಧಾರ ಮಾಡಿದ್ದಾರೆ. ತಾಲೂಕಿನವರನ್ನು ಬಿಟ್ಟು ಪಕ್ಷ ಬೇರೆಯವರಿಗೆ ಟಿಕೆಟ್‌ ನೀಡಿದ್ದೇ ಆದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗೋ ಪ್ರಶ್ನೆಯೇ ಇಲ್ಲ ಅಂತಾ ಹೈಕಮಾಂಡ್ ಗೆ ಮಾಜಿ ಸಚಿವ ತಹಶೀಲ್ದಾರ ಎಚ್ಚರಿಕೆ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಮನೋಹರ ತಹಶೀಲ್ದಾರಗೆ ಕೈ ತಪ್ಪಿದ್ದು, ಸೋಲಿನ ನಂತರವೂ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ಸಂಘಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಾನೆ ತೊಡಗಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಗೆ ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಸೇರಿದಂತೆ ಹಲವು ಮುಖಂಡರು ಟಿಕೇಟ್ ಆಕಾಂಕ್ಷೆಯಾಗಿದ್ದಾರೆ.

 

____

Share this News
error: Content is protected !!