July 25, 2021

SAD NEWS| ಜೀವನ ನಿರ್ವಹಣೆಗಾಗಿ ರಸ್ತೆ ಬದಿ ಚಿಪ್ಸ್ ಮಾರುತ್ತಿರುವ 28 ಚಿನ್ನದ ಪದಕ‌ ವಿಜೇತ ಪ್ಯಾರಾ ಶೂಟರ್.!

ಉತ್ತರಖಾಂಡ- 28 ಬಾರಿ ಚಿನ್ನದ ಪದಕ ಗೆದ್ದಿರುವ ದೇಶದ ಮೊದಲ ಅಂತರಾಷ್ಟ್ರೀಯ ಮಟ್ಟದ ಪ್ಯಾರಾ ಒಲಂಪಿಕ್ ಶೂಟರ್ ದಿಲಾಜ್ ಕೌರ್ ಈಗ ಜೀವನ ನಡೆಸುವುದಕ್ಕಾಗಿ ರಸ್ತೆ ಬದಿ ಚಿಪ್ಸ್ ಮಾರುತ್ತಿದ್ದಾರೆ.

ದಿಲಾಜ್ ಕೌರ್ ಅವರು ಉತ್ತರಾಖಂಡದ ರಾಜಧಾನಿ
ಡೆಹ್ರಾಡೂನ್‌ನ ರಸ್ತೆ ಬದಿಯಲ್ಲಿ ಚಿಪ್ಸ್ ಮತ್ತು ಬಿಸ್ಕತ್ ಗಳನ್ನು ಮಾರಾಟ ಮಾಡುವ ಮೂಲಕ ತುತ್ತಿನ ಚೀಲ ತುಂಬಿಸಿಕೊಳ್ಳುವಂತಾಗಿದೆ. ಈ ಕುರಿತು ಮಾತನಾಡಿರುವ ಕೌರ್, ಪ್ರಸ್ತುತ ನನ್ನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಸಾಕಷ್ಟು ಬಾರಿ ಸರ್ಕಾರವನ್ನು ಸಂಪರ್ಕಿಸುವ ಪ್ರಯತ್ನ ಮಾಡಿದರೂ ಅದೂ ಸಫಲವಾಗಿಲ್ಲ. ಹೀಗಾಗಿ ಜೀವನ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡುತ್ತಿರುವುದಾಗಿ ಹೇಳಿದ್ದಾರೆ.

ನಾನು 2004ರಲ್ಲಿ ಶೂಟಿಂಗ್ ಪ್ರಾರಂಭಿಸಿದೆ. ರಾಷ್ಟ್ರಮಟ್ಟದಲ್ಲಿ 28 ಚಿನ್ನ, 8 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಗೆದ್ದಿದ್ದೇನೆ. ಅಂತರರಾಷ್ಟ್ರೀಯ ಆಟಗಳಲ್ಲಿಯೂ ಭಾಗವಹಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Share this News
error: Content is protected !!