July 25, 2021

NEXT CM| “ಮುಂದಿನ ಸಿಎಂ ಸಿದ್ದರಾಮಯ್ಯ”; ಕಾರ ಹುಣ್ಣಿಮೆಯಂದು ಎತ್ತುಗಳ ಮೇಲೆ ಬರೆದ ಅಭಿಮಾನಿಗಳು.!

ಗದಗ: ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದ್ದು, ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅಭಿಮಾನಿಗಳು “ಮು೦ದಿನ ಸಿಎಂ ಸಿದ್ದರಾಮಯ್ಯ” ಎಂದು ಬರೆದಿದ್ದಾರೆ.

ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನ ಕರಿ ಹರಿಯುವ ಸಂಪ್ರದಾಯಕ್ಕೆ ತಕ್ಕಂತೆ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ವೇಳೆ “ಮುಂದಿನ ಸಿಎಂ ಸಿದ್ದರಾಮಯ್ಯ” ಎನ್ನುವ ಬರವಣಿಗೆಯೊಂದು ಎಲ್ಲರ ಗಮನ ಸೆಳೆದಿದೆ.

ಈ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ
ಅಭಿಮಾನಿಗಳು ಕಾರ ಹುಣ್ಣಿಮೆ ದಿನ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ತಮ್ಮ ಅಭಿಮಾನ ತೋರಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಾರ ಹುಣ್ಣಿಮೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಮೇ ವೈರಸ್‌ನಿಂದಾಗಿ ಸರಳವಾಗಿ ಆಚರಿಸಲಾಗಿದೆ.

Share this News
error: Content is protected !!