July 25, 2021

ಇಂದಿನಿಂದ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ವ್ಯಾಕ್ಸಿನ್; ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ.

ಹಾವೇರಿ: ಜೂ.27 ರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಪನ್ಯಾಸಕರಿಗೆ ಮತ್ತು ಸಂಬಂಧಿಸಿದ ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮಿಷನ್ ಮೋಡ್ ಮಾದರಿಯಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲು ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಲಸಿಕಾಕರಣವನ್ನು ಹಮ್ಮಿಕೊಂಡಿದೆ.

ಆದ್ದರಿಂದ ಜಿಲ್ಲೆಯ ಎಲ್ಲ ತಾಲೂಕಿನಡಿ ಬರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ತಮ್ಮ ತಮ್ಮ ಕಾಲೇಜುಗಳಲ್ಲಿ ಆಯೋಜಿಸರುವ ಕೋವಿಡ್-19 ಲಸಿಕಾ ಕೇಂದ್ರಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮ ಪಾಲನೆ ಮಾಡಿ ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

Share this News
error: Content is protected !!