July 25, 2021

JOGA FALLS| ಇಂದಿನಿಂದ ಜೋಗ ಜಲಪಾತ ಸಾರ್ವಜನಿಕ ವೀಕ್ಷಣೆಗೆ ಅವಕಾಶ.!

ಶಿವಮೊಗ್ಗ: ಇಂದಿನಿಂದ ಜೋಗ ಜಲಪಾತ ಮತ್ತು ಕುಪ್ಪಳಿಯಲ್ಲಿರುವ ರಾಷ್ಟ್ರಕವಿ ಕುವೆಂಪುರವರ ಮನೆ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5ರ ವರಗೆ ಸದ್ಯಕ್ಕೆ ಸಮಯಾವಕಾಶ ನಿಗದಿಪಡಿಸಲಾಗಿದೆ.

ಸುಮಾರು ಎರಡು ತಿಂಗಳಿಂದ ಸಾರ್ವಜನಿಕ ವೀಕ್ಷಣೆಯನ್ನು ನಿರ್ಬಂಧಿಸಲಾಗಿತ್ತು. ಆದರೆ ಕೋವಿಡ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜೋಗ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿ ರಾಮಕೃಷ್ಣ, ಜೋಗದಲ್ಲಿ ಜೋಗದ ಕೆಳಗೆ ಗುಂಡಿಗೆ ಇಳಿಯಲು ಅವಕಾಶವಿಲ್ಲ. ಆದರೆ ಜಲಪಾತ ವೀಕ್ಷಣೆಗೆ ಅವಕಾಶವಿದೆ. ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಕೋವಿಡ್ ನಿಯಮಾವಳಿಗಳನ್ನು ಪ್ರವಾಸಿಗರು ಕಾಪಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ಪಶ್ಚಿಮಘಟ್ಟದಲ್ಲಿ ಮುಂಗಾರುವಿನ ಅಬ್ಬರ ಆರಂಭವಾಗಿದೆ. ಮಳೆಗೆ ನದಿ‌ ನೀರು ಮೈದುಂಬಿಕೊಂಡು ಜೋಗ ಫಾಲ್ಸ್ ನಲ್ಲಿ ರಾಜಾ, ರಾಣಿ, ರೋರಲ್, ರಾಕೆಟ್ ಆಗಿ ಧುಮಕುವ ದೃಶ್ಯ ರಮಣೀಯವಾಗಿದೆ. ಈ ಹಿನ್ನಲೆಯಲ್ಲಿ ಪ್ರವಾಸಿಗರ ಸಂಖ್ಯೆಯೂ ಸಹ ಹೆಚ್ಚಾಗಲಿದೆ. ಕೊರೋನಾ ದಿಂದ ಮನೆಯಲ್ಲಿರುವವರಿಗೆ ಜೋಗ ನೋಡಲು ಈಗ ಒಳ್ಳೆಯ ಸಮಯ ಎನ್ನಬಹುದು.

Share this News
error: Content is protected !!