July 25, 2021

ಕೇಂದ್ರ ಸಚಿವ ಸಂಪುಟ ಪುನಾರಚನೆ: ಸಚಿವ ಸ್ಥಾನ ಯಾರಿಗೆ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ. -ಸಂಸದ ಶಿವಕುಮಾರ್ ಉದಾಸಿ.!

ಹಾವೇರಿ- ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು‌ ಅದು ಪ್ರಧಾನ ಮಂತ್ರಿಗಳ ಡಿಸ್ಕ್ರೀಟ್ರಿ ಪವರ್. ಸಚಿವ ಸ್ಥಾನ ಯಾರಿಗೆ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಹಾವೇರಿಯ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು
ಸಚಿವ ಸ್ಥಾನ ಯಾರಿಗೆ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಕೈ ಮುಗಿದು ಹೇಳಿದರು.

ವಿವಿಧ ಹುದ್ದೆಗಳಿಗೆ ಸರಕಾರ ಹೊರಡಿಸಿರುವ ನೇಮಕಾತಿ ಆದೇಶ ನೋಡಲು ಇಲ್ಲಿ click ಮಾಡಿ

ಇನ್ನು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ ಹೆಸರು ಕೇಳಿಬಂದಿರೋ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಮಾಹಿತಿ ಇಲ್ಲ. ನಮ್ಮ ಅಪ್ಪಾರು ತೀರಿಕೊಂಡು ಇಪ್ಪತ್ತು ದಿವಸ ಆಗೈತಿ. ನಾನು ಅದರ ಬಗ್ಗೆ ಆಲೋಚನೆ ಮಾಡಿಲ್ಲ. ನನ್ನ ಪಾಡಿಗೆ ನಾನು ಎಂಪಿ ಕೆಲಸ ಮಾಡ್ತಿದ್ದೇನೆ.ಸದ್ಯ ನಾನು ಎಂಪಿ‌ ಕೆಲಸ ಮಾಡಾಕುಂತೀನಿ ಎಂದು ಶಿವಕುಮಾರ್ ಉದಾಸಿ ಹೇಳಿದ್ದಾರೆ.

______

Share this News
error: Content is protected !!