July 25, 2021

TICKET FIGHTING| ಕೆಪಿಸಿಸಿ ಕಾರ್ಯಧ್ಯಕ್ಷರ ಮುಂದೆಯೇ ಟಿಕೇಟ್ ಗಾಗಿ ಕೈ ಕೈ ಮಿಲಾಯಿಸಿದ ಕಾಂಗ್ರೇಸ್ ಕಾರ್ಯಕರ್ತರು.!

ಹಾವೇರಿ : ಮಾಜಿ ಸಚಿವ ಹಾಲಿ ಶಾಸಕರಾಗಿದ್ದ ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರು ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲಿ ಉಪ ಚುನಾವಣೆ ನಡೆಯಲಿದೆ. ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಪೈಟ್ ತಾರಕ್ಕಕ್ಕೆ ಏರಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಮನೋಹರ್ ಹಾಗೂ ಶ್ರೀನಿವಾಸ ಮಾನೆ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ.

ಬಿಜೆಪಿ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ನಡೆಯುವ ಪ್ರತಿಭಟನೆಯ ಮುಂದಾಳತ್ವ ವಹಿಸಲು ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಹಾನಗಲ್ಲನ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡುವಂತೆ ವರಿಷ್ಠ ಸಲೀಂ ಅಹ್ಮದ್ ಅವರಿಗೆ ಮನವರಿಕೆ ಮಾಡಿಕೊಳ್ಳಲು ಮುಂದಾದ ಸಮಯದಲ್ಲಿ ಆರೋಪ-ಪ್ರತ್ಯಾರೋಪ ತಾರಕಕ್ಕೆ ಏರಿ ಕೈ ಕೈ ಮಿಲಾಯಿಸುವಂತಾಯಿತು.

ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ಹಾನಗಲ್ಲ ತಾಲೂಕಿನಲ್ಲಿ ನಡೆಯುವ ಉಪಚುನಾವಣೆಯ ಟಿಕೆಟ್ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಉಭಯ ನಾಯಕರಗಳ ಬೆಂಬಲಿಗರು ತಮ್ಮ ತಮ್ಮ ನಾಯಕರ ಬೆಂಬಲಿಸಿ ಮಾತಿನ ಚಕಮಕಿ ನಡೆಯಿತು.

ಈ ಸಮಯದಲ್ಲಿ ಮಧ್ಯ ಪ್ರವೇಶ ಮಾಡಿದ ಜಿಲ್ಲಾಮಟ್ಟದ ನಾಯಕರು ಎರಡು ಗುಂಪಿನ ಕಾರ್ಯಕರ್ತರನ್ನು ಹೊರ ಕಳುಹಿಸಿದರು. ಬಳಿಕ ಮಾನೆ ಬೆಂಬಗಲಿಗರು ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಸಭೆ ನಡೆಸಿದರು. ಮನೋಹರ ಬೆಂಬಗಲಿಗರು ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಮ್ಮುಖದಲ್ಲಿ ಉಭಯ ನಾಯಕರ ತಲಾ ಹತ್ತು- ಹತ್ತು ಜನರು ಅಭಿಪ್ರಾಯ ಸಂಗ್ರಹಿಸಿದರು.

Share this News
error: Content is protected !!