ಹಾವೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ (ಓಅSP) ಸಹಯೋಗದಲ್ಲಿ ಫೆಬ್ರುವರಿ 16 ರಂದು ಬೆಳಿಗ್ಗೆ 10-30 ಗಂಟೆಯಿಂದ ಹಿರೇಕೆರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಉದ್ಯೋಗದಾತಸಂಸ್ಥೆಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಐ.ಟಿ.ಐ (ಯಾವುದೇ ಟ್ರೆಡ್), ಡಿಪೆÇ್ಲೀಮಾ ಹಾಗೂ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯಸ್ಸಿನ ಆಸಕ್ತ ಯುವಕ ಯುವತಿಯರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡಾಟಾದ, ಶೈಕ್ಷಣಿಕ ದಾಖಲೆಗಳು ಮತ್ತು ಆಧಾರ ಕಾರ್ಡ ಝರಾಕ್ಸ್ ಪ್ರತಿಯ ಹತ್ತು ಸೆಟ್ಗಳೊಂದಿಗೆ ಹಾಜರಾಗಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿಯನ್ನು ಮಾಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08375-249291, ಮೊ.7975960913/ 8660301991/ 9481930137ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಕೊರೋನಾ ಲಸಿಕೆ ಪಡೆದ ನಂತರ ಕೃಷಿ ಸಚಿವ ಬಿ.ಸಿ.ಪಾಟೀಲ ಏನು ಹೇಳಿದ್ರು ಗೊತ್ತಾ..?
ಬಿಜೆಪಿ ಸಚಿವರ ಮೇಲೆ ಮುಸ್ಲಿಂ ಅಭಿಮಾನಿಯ ಅಭಿಮಾನ. ಅಭಿಮಾನಿ ಮಾಡಿದ್ದಾದರೂ ಏನು..!?.
ಬಿಪಿಎಲ್ ಪಡಿತರ ಚೀಟಿ ಹಿಂತಿರುಗಿಸಿ, ಇಲ್ಲಾಂದ್ರೆ ಕ್ರಿಮಿನಲ್ ಕೇಸ್.!?