ಬಿಸಿ ಸುದ್ದಿ
October 20, 2021

ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ; ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆ ಶುಲ್ಕ ಖಂಡಿಸಿ ಎಸ್.ಎಫ್ ಐ ಪ್ರತಿಭಟನೆ.!

ಹಾವೇರಿ – ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುತ್ತಿರುವ ಕ್ರಮ ಖಂಡಿಸಿ ಹಾವೇರಿಯಲ್ಲಿ ಎಸ್.ಎಫ್. ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹೊಸಮನಿ‌ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನ ಒಂದೆ ತಿಂಗಳಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುತ್ತಿದೆ. ಹಾಗೂ ಪರೀಕ್ಷೆ ಶುಲ್ಕವನ್ನು ಮನ್ನಾ ಮಾಡಬೇಕು. ಕೊರೋನಾ ಲಾಕ್ ಡೌನ್ ನಿಂದ ಪೋಷಕರ ಕಡೆ ಉದ್ಯೋಗ ಇಲ್ಲದೆ ಸರಿಯಾದ ಹಣ ಇಲ್ಲ. ಪರೀಕ್ಷಾ ಶುಲ್ಕವನ್ನ ಕಡಿಮೆ ಮಾಡಿ ಇಲ್ಲವೇ ಮನ್ನಾ ಮಾಡಬೇಕು ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯು ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆಯಿತು. ಎಸ್ಎಫ್ಐ ಸಹ ಕಾರ್ಯದರ್ಶಿ ಬಸವರಾಜ ಭೋವಿ, ಕಾರ್ಯಕರ್ತರು ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆ ಭಾಗವಹಿಸಿದ್ದರು.

Share this News
error: Content is protected !!