July 25, 2021

Uppar tunga Project| ತುಂಗಾಮೇಲ್ದಂಡೆ ಕಚೇರಿಗೆ ಮುತ್ತಿಗೆ; ಕಳಪೆ ಕಾಮಗಾರಿ ಮಾಡಿದ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ರೈತರು.!

ಹಾವೇರಿ- ತುಂಗಾ ಮೇಲ್ದಂಡೆ ಕಾಲುವೆ ನಿರ್ಮಾಣ ಮಾಡಿ ನಾಲ್ಕು ವರ್ಷ ಕಳೆದರೂ ಪರಿಹಾರ ನೀಡಿಲ್ಲ.‌ ಪರಿಹಾರ ನೀಡುವಂತೆ ಆಗ್ರಹಿಸಿ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ನೀರಾವರಿ ಇಲಾಖೆಯ ಕಚೇರಿಗೆ ಆಗಮಿಸಿದ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ೨೦ ಕ್ಕೂ ಅಧಿಕ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇವಗಿರಿ ಗ್ರಾಮದ ರೈತರ 67 ಎಕರೆ ಜಮೀನಿನಲ್ಲಿ ಕಾಲುವೆ ನಿರ್ಮಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣ ಮಾಡಿದ್ದಾರೆ. ರೈತರ ಜಮೀನು ಸ್ವಾಧೀನ ಮಾಡಿಕೊಳ್ಳುವ ಮುನ್ನ ರೈತರಿಗೆ ಸಿಕ್ಸ್ ಒನ್, ಫೋರ್ ಒನ್ ನೊಟೀಸ್ ನೀಡದೇ ಕಾಮಗಾರಿ ಮಾಡಿದ್ದಾರೆ. ಕಾನೂನಿನ ಪ್ರಕಾರ ರೈತರಿಗೆ ಪರಿಹಾರದ ಹಣ ನಿಗದಿ ಮಾಡಿ, ಪರಿಹಾರ ವಿತರಿಸಬೇಕು. ಯಾವುದೇ ಪರಿಹಾರ ನೀಡದೆ ಕಾಲುವೆ ಕಾಮಗಾರಿ ಮಾಡಿದ್ದಾರೆ.

ಕಳಪೆ ಕಾಮಗಾರಿ ಮಾಡಿದ್ದರಿಂದ ಕಾಲುವೆ ಒಡೆದು ರೈತರ ಜಮೀನು ಹಾನಿಯಾಗಿದೆ. ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ನಮಗೆ ಪರಿಹಾರ ಕೊಡಬೇಕು. ಇಲ್ಲವಾದರೆ ಕಾಲುವೆ ಮುಚ್ಚಬೇಕು ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಾಂತೇಶ್ ಬಾಗಿ ಹಾಗೂ ಗುತ್ತಿಗೆದಾರರನ್ನು ರೈತರು ತರಾಟೆಗೆ ತೆಗೆದುಕೊಂಡರು.

Share this News
error: Content is protected !!