July 25, 2021

ಬ್ಯಾಡಗಿ | ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ.!

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಬುಧವಾರ ಬ್ಯಾಡಗಿ ಪಟ್ಟಣದಲ್ಲಿ ವಿವಿಧ 15 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಲಾಗಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಜಗಿದು ಉಗುಳುವವರ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-4 ರಡಿ ರೂ.1350 ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ಸಲಹೆಗಾರರಾದ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸುಹೀಲ ಹರವಿ, ಹಿರಿಯ ಆರೋಗ್ಯ ಸಹಾಯಕ ಹಿರಿಯಕ್ಕನವರ, ಮಹೇಶ ಕುಮ್ಮೂರ, ಪೊಲೀಸ್ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

Share this News
error: Content is protected !!