ಬಿಸಿ ಸುದ್ದಿ
September 27, 2021

UREA FERTILIZER PROBLEM| ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆ; ಯೂರಿಯಾ ಗೊಬ್ಬರಕ್ಕಾಗಿ ಅನ್ನದಾತರ ಪರದಾಟ.!

ಹಾವೇರಿ – ಜಿಲ್ಲೆಯ ರೈತರು ಮಳೆರಾಯನ ಆರ್ಭಟದಿಂದ ಕಂಗಾಲಾಗಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗಿದೆ. ಹೀಗಾಗಿ ಮೆಕ್ಕೆಜೋಳ ,ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಯೂರಿಯಾ ಗೊಬ್ಬರ ಅವಶ್ಯಕವಾಗಿ ಬೇಕಾಗಿದೆ. ಆದರೆ ಸಕಾಲಕ್ಕೆ ಗೊಬ್ಬರ ಸಿಗದೇ ರೈತರು ಪರದಾಡುವಂತಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಎಪಿಎಂಸಿ ಆವರಣದಲ್ಲಿ ಸಾವಿರಾರು ರೈತರು ಗೊಬ್ಬರ ಸಿಗದೇ ಪರದಾಡಿದ ಘಟನೆ ನಡೆದಿದೆ.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ನಿನ್ನೆ,ಮತ್ತು ಇವತ್ತು ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ನಿನ್ನೆಯಿಂದ ಮಳೆ ಕಡಿಮೆಯಾಗಿರುವುದಕ್ಕೆ ಅನ್ನದಾತರು ಬೆಳೆ ರಕ್ಷಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೀಗಾಗಿ ಯೂರಿಯಾ ಗೊಬ್ಬರ ಪಡೆಯಲು ನೂಕು ನುಗ್ಗಲು ಉಂಟಾಗಿದೆ.

ನಿರಂತರ ಮಳೆಯಿಂದ ರಕ್ಷಿಸಿಕೊಳ್ಳಲು ಯೂರಿಯಾ ಗೊಬ್ಬರಕ್ಕಾಗಿ ಅನ್ನದಾತರು ಮುಗಿಬಿದ್ದಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಣ ‌ಮಾಡಲು ಹರಸಾಹಸ ಪಡುವಂತಾಯ್ತು. ನಿರಂತರ ಮಳೆಗೆ ಹತ್ತಿ, ಮೆಕ್ಕೆಜೋಳ, ಮೆಣಸಿನಕಾಯಿ, ಶೇಂಗಾ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಈ ಸಂದರ್ಭದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಅವಶ್ಯಕವಾಗಿ ಬೇಕಾಗಿದೆ. ರೈತರಿಗೆ ಕೊರತೆಯಾಗದಂತೆ ಹೆಚ್ಚು ಯೂರಿಯಾ ಗೊಬ್ಬರವನ್ನು ಒದಗಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

____

Share this News
error: Content is protected !!