March 7, 2021

ಸರಿಸುಮಾರು ಮುಂಜಾವಿನ ಮೂರು ಗಂಟೆ ಸಮಯ, ಒಂದು ಕೂಗು, ಎರಡು ಮನೆಯ ಹತ್ತಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿತು

ಹಾವೇರಿ – ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ‌ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.‌

ಗ್ರಾಮದ ಚಂದ್ರಪ್ಪ ಬೂದಿಹಳ್ಳಿ ಮತ್ತು ನಿಂಗಪ್ಪ ಬೂದಿಹಳ್ಳಿ ಎಂಬುವರಿಗೆ ಸೇರಿದ ಮನೆಯಾಗಿದೆ. ಈ‌ ವೇಳೆ ಮನೆಯಲ್ಲಿ ಹತ್ತಕ್ಕೂ ಹೆಚ್ಚು ಜನರು ವಾಸವಿದ್ದರು. ಬೆಂಕಿ ಬಿದ್ದ ತಕ್ಷಣ ಕೂಗುತ್ತಾ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಅಕ್ಕಪಕ್ಕದ ಮನೆ ಸೇರಿದಂತೆ ಹತ್ತಕ್ಕೂ ಹೆಚ್ಚೂ ಜನರಿದ್ದರು ಎಂದು ತಿಳಿದುಬಂದಿದೆ. ಬೆಂಕಿ‌ ಕಾಣಿಸಿಕೊಳ್ತಿದ್ದಂತೆ ಮನೆಯಿಂದ ಹೊರಗೆ ಬಂದಿದ್ದರಿಂದ ಮನೆಯವರು ಅದೃಷ್ಟವಶಾತ್ ಪಾರಾಗಿದ್ದಾರೆ‌. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

ಇದನ್ನೂ ಓದಿ  ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ದಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಾಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ  ಮುತ್ತಿನ ರಾಶಿ ಮೂರು ಪಾಲು ಆದಿತಲೇ ಪರಾಕ್..!

_____

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!