ಬಿಸಿ ಸುದ್ದಿ
October 20, 2021

ವೃದ್ಧಾಪ್ಯ ವೇತನ ಮಂಜೂರು ಮಾಡಲು ಲಂಚದ ಬೇಡಿಕೆ; ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದ ಗ್ರಾಮಲೆಕ್ಕಾಧಿಕಾರಿ.!

ಹಾನಗಲ್ (ಸುದ್ದಿತರಂಗ ಸೆ,16) – ಮೂರೂವರೆ ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅರೇಲಕಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬಸವರಾಜ ಕುಂಚೂರು ಎನ್ನುವವರು ಬಾಳಂಬೀಡ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ವೃದ್ಧಾಪ್ಯ ವೇತನ ಮಂಜೂರು ಮಾಡಲು ಸಹದೇವಪ್ಪ ಎಂಬುವರಿಗೆ ಹತ್ತು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.‌ ಇವತ್ತು ಮುಂಗಡವಾಗಿ ಮೂರುವರೆ ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಹಿಡಿದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

______

Share this News
error: Content is protected !!