ಮಂಡ್ಯ – ಮಾಜಿ ಸಿದ್ದರಾಮಯ್ಯ ಹಾಗೂ ನಟ ಯಶ್ ಅಭಿಮಾನಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ತಾಲೂಕು ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನ ಕೃಷ್ಣ 24 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ.
ಯುವಕನ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅಂತಿಮ ದರ್ಶನ ಪಡೆದರು.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಕೃಷ್ಣ ಎಂಬ ಯುವಕ, ನನ್ನ ಸಾವಿನ ಅಂತ್ಯಕ್ರಿಯೆಯಲ್ಲಿ ನಟ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು. ಏಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ ಎಂದು ಪತ್ರ ಬರೆದಿದ್ದ.
ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದರು. ಇನ್ನು ನಟ ಯಶ್ ಕೂಡ ತಮ್ಮ ಟಿಟ್ವಿರ್ ಮೂಲಕ ಯುವಕನಿಗೆ ಆತ್ಮಕ್ಕೆ ಶಾಂತಿ ದೊರಯಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
More Stories
ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ..!