June 22, 2021

ಅಕಾಲಿಕ ಆಲಿಕಲ್ಲು ಮಳೆಗೆ ಬೆಚ್ಚಿಬಿದ್ದ ಅನ್ನದಾತ

ಹಾವೇರಿ – ಹಾವೇರಿ ಜಿಲ್ಲೆಯ ಕೆಲವೆಡೆ ಗಾಳಿ ಸಮೇತ ಅಕಾಲಿಕ ಮಳೆಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮತ್ತು ಹಿರೇಕೆರೂರು ತಾಲೂಕಿನ ಕೆಲವೆಡೆ ಬೇಸಿಗೆ ಆರಂಭಕ್ಕೂ ಮುನ್ನವೇ ಮಳೆಯಾಗಿದೆ. ಅರ್ಧ ಗಂಟೆ ಕಾಲ‌ ಸುರಿದ ಅಕಾಲಿಕ ಮಳೆಗೆ ಜಿಲ್ಲೆಯ ಅನ್ನದಾತರು ಕಂಗಾಲ ಆಗಿದ್ದಾರೆ.

ರಾಣೆಬೆನ್ನೂರು ನಗರದಲ್ಲಿ ಆಲಿಕಲ್ಲು ಮಳೆ ಸುರಿದ್ದು, ಗಾಳಿ ಸಮೇತ ಮಳೆಯಾಗಿದೆ. ಹತ್ತಿ ಮತ್ತು ಜೋಳ ಕಟಾವಿಗೆ ಬಂದಿದೆ. ಅಕಾಲಿಕ ಮಳೆಗೆ ಅನ್ನದಾತರು ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ನಾಳೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಆಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

___ ___

Share this News
error: Content is protected !!