June 22, 2021

ಎಸ್.ಎಸ್.ಎಲ್.ಸಿ. ವಾರ್ಷಿಕ ಫಲಿತಾಂಶ ಸುಧಾರಣೆಗೆ ಸಾಮೂಹಿಕ ಶ್ರಮ -ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಹಾವೇರಿ: ಕೋವಿಡ್‍ನಿಂದಾಗಿ ಕೋವಿಡ್ ಸಂಕಷ್ಟದಿಂದಾಗಿ ವಿದ್ಯಾರ್ಥಿಗಳ ತರಗತಿಯ ಬೋಧನೆಯಲ್ಲಿ ವ್ಯತ್ಯಯವಾಗಿದೆ, ಇಂತಹ ಸಂದಿಗ್ದ ಸಂದರ್ಭದಲ್ಲಿ ಉಳಿದ ಶೈಕ್ಷಣಿಕ ಅವಧಿಯಲ್ಲಿ ಸಮರ್ಥವಾಗಿ ಬಳಸಿಕೊಂಡು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಪ್ರಯತ್ನಿಸೋಣ ಎಂದು ಕರೆ ನೀಡಿದರು.

ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಲಾದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕೋವಿಡ್‍ನಿಂದಾಗಿ ಇಂದು ಎಲ್ಲರೂ ಆರ್ಥಿಕ ಸಂಕಷ್ಟ ಎದುರಿಸಬೇಕಾಗಿದೆ. ದೇಶದಲ್ಲಿ ಅನೇಕ ಖಾಸಗಿ ಶಾಲೆಗಳು ಮುಚ್ಚಿಹೋಗಿವೆ. ಆದರೆ ಅದೃಷ್ಟವಶಾತ ರಾಜ್ಯ ಹಾಗೂ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ಹೋಗಿಲ್ಲ. ಖಾಸಗಿ ಶಾಲೆಗಳ ಬಗ್ಗೆ ಕಾಳಜಿ ಇದೆ, ಖಾಸಗಿ ಶಾಲೆಗಳ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇವೆ. ಆದರೆ ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕೆಲಸಮಾಡಬೇಕಾಗುತ್ತದೆ. ಹಾಗಾಗಿ ಜಿಲ್ಲಾ ಮಟ್ಟದಲ್ಲಿ ಪರಿಹರಿಸಬಹುದಾದ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ನಿಮ್ಮ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸಮಾಡುವುದು ಎಂದು ಭರವಸೆ ನೀಡಿದರು.
ಖಾಸಗಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಮಾತನಾಡಿ, ನಮಗೂ ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಬಗ್ಗೆ ಕಾಳಜಿ ಇದೆ. ಆದರೆ ಸರ್ಕಾರದ ಸೂಚನೆಯಿಂದ ಬಹಳ ತೊಂದರೆಯಾಗಿದೆ. ದೊಡ್ಡ ನಗರ ಹಾಗೂ ಸಾಮಾನ್ಯ ನಗರಗಳಿಗೆ ಒಂದೇ ಶುಲ್ಕ ಇರುವುದಿಲ್ಲ. ಶುಲ್ಕ ವಿನಾಯಿತಿ ಮಾಡಿದರೆ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಹಾಗೂ ಆಡಳಿತ ಮಂಡಳಿ ಸಿಬ್ಬಂದಿಗಳಿಗೆ ವೇತನ ಪಾವತಿ ಹಾಗೂ ಕಟ್ಟಡ ನಿರ್ವಹಣೆ ಕಷ್ಟವಾಗುತ್ತದೆ ಎಂದು ತಮ್ಮ ಸಮಸ್ಯೆಯನ್ನು ಹೇಳಿಕೊಂಡರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್ ಅವರು ಮಾತನಾಡಿ, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಏಕನಾಥ ಭಾನುವಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಡಯಟ್ ಉಪನಿರ್ದೇಶಕ ಡಿ.ಎಂ.ಬಸವರಾಜ, ಡಯಟ್ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಶ್ರೀಮತಿ ಸುನಿತಾ, ಸವಣೂರ ಕ್ಷೇತ್ರ ಶಿಕ್ಷಣಾಧಿಕಾರಿ ಬೆನಕಪ್ಪ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಶಿಗ್ಗಾಂವ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಮಠ, ಹಾನಗಲ್ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ, ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ ಹಾಗೂ ಹಿರೇಕೆರೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು. ಶಿಕ್ಷಣಾಧಿಕಾರಿ ಶ್ರೀಧರ ಅವರು ಸ್ವಾಗತಿಸಿದರು.

Share this News
error: Content is protected !!