April 22, 2021

ಬೈಕ್ ಗೆ ಟಿಪ್ಪರ್ ಡಿಕ್ಕಿ- ಸ್ಥಳದಲ್ಲೆ ನಾಲ್ವರು ಸಾವು

ರಾಣೆಬೆನ್ನೂರ: ಬೈಕ್​ಗೆ ಟಿಪ್ಪರ ಡಿಕ್ಕಿಯಾಗಿ ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಣೆಬೆನ್ನೂರ ತಾಲೂಕಿನ ಇಟಗಿ ಗ್ರಾಮದ ಬಳಿ ನಡೆದಿದೆ.

ಮೃತರನ್ನ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಸಿದ್ದಪ್ಪ ನಾಗೇನಹಳ್ಳಿ(45), ಪತ್ನಿ ಅನುಸೂಯಮ್ಮ(35) ಹಾಗೂ ಇಬ್ಬರು ‌ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಮುದೇನೂರು ಗ್ರಾಮದಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನವು ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸ್ಥಳಕ್ಕೆ ಹಲಗೇರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!