ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ಇದೇ ಫೆಬ್ರುವರಿ 28 ರಂದು ಭಾನುವಾರ ಎಫ್.ಡಿ.ಎ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಿಗಧಿತ ಕೇಂದ್ರಗಳಲ್ಲಿ ನಡೆಯಲಿದೆ. ಲೋಕಸೇವಾ ಆಯೋಗದ ವೆಬ್ಸೈಟ್ನಲ್ಲಿ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಇದೇ ಪ್ರವೇಶ ಪತ್ರ ತೋರಿಸಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.
ಜನವರಿ 24 ರಂದು ನಡೆಯಬೇಕಾಗಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆಯ ನೇಮಕಾತಿ ಪರೀಕ್ಷೆ ಕಾರಣಾಂತರದಿಂದ ಮುಂದೂಡಿದ ಪರೀಕ್ಷೆಯನ್ನು ಫೆಬ್ರುವರಿ 28ರಂದು ಭಾನುವಾರ ನಡೆಯಲಿದೆ.
ಜನವರಿ 24 ರಂದು ನಡೆಯುವ ಪರೀಕ್ಷೆಗೆ ಬಿಡುಗಡೆಗೊಳಿಸಿದ ಪ್ರವೇಶಪತ್ರವನ್ನು ರದ್ದುಪಡಿಸಿ ಹೊಸ ಪ್ರವೇಶಪತ್ರವನ್ನು ವೆಬ್ಸೈಟ್ನಲ್ಲಿ ಬಿಡುಗಡೆಗೊಳಿಸಿದೆ. ಫೆ.28 ರಂದು ನಡೆಯುವ ಪರೀಕ್ಷೆಗೆ ಹಳೆಯ ಪ್ರವೇಶಪತ್ರವನ್ನು ಮಾನ್ಯಮಾಡುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ನಲ್ಲಿ ಹೊಸದಾಗಿ ಡೌನ್ ಮಾಡಿಕೊಂಡು ಪರೀಕ್ಷೆ ಸಂದರ್ಭದಲ್ಲಿ ಹಾಜರುಪಡಿಸಬೇಕು ಎಂದು ನೊಂದಾಯಿತ ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.
ರಾಜ್ಯ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ ನವದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ ಕರ್ನಾಟಕ ವೃಂದದ ಸಹಾಯಕ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಹಾವೇರಿ ನಗರದ 22 ಹಾಗೂ ರಾಣೇಬೆನ್ನೂರ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪರಿಷ್ಕೃತ ಪ್ರವೇಶಪತ್ರವನ್ನು ಹಾಜರುಪಡಿಸಬೇಕು. ದಿನಾಂಕ 24-01-2021ರ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶಪತ್ರವನ್ನು ಹಾಜರುಪಡಿಸಿದ್ದಲ್ಲಿ ಅಂಹತ ಅಭ್ಯರ್ಥಿಗಳಿಗೆ ದಿನಾಂಕ 28-02-2021ರ ಪರೀಕ್ಷೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.
ಹೊಸ ಪ್ರವೇಶಪತ್ರಗಳನ್ನು ಡೌನ್ಲೋಡ್ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆಯಾದಲ್ಲಿ ಟೋಲ್ ಫ್ರೀ ಸಂಖ್ಯೆ18005728707 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟನ್ನಲ್ಲಿ ಭಿತ್ತರಿಸಿರುವ ದಿನಾಂಕ 20-02-2021ರ ಪ್ರಕಟಣೆಯನ್ನು ವೀಕ್ಷಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಜನತಾ ಕರ್ಫ್ಯೂ ಪಾಲನೆ ಮಾಡಿ, ಕೋವಿಡ್ ಚಿಕಿತ್ಸೆಗೆ ನ್ಯೂನ್ಯತೆಯಾಗದಂತೆ ಮುನ್ನೆಚ್ಚರಿಕೆ: ಶಿಗ್ಗಾಂವ-ಸವಣೂರ ಆಸ್ಪತ್ರೆಗೆ ಡಿಸಿ ಭೇಟಿ ಪರಿಶೀಲನೆ..!
ಕೊರೋನಾ ಎರಡನೇಯ ಅಲೆಯ ಭಯ: ಮಾನವೀಯತೆ ಮರೆತ ಜನ, ಅನಾಥವಾಗಿ ಬಿದ್ದ ಬಿಕ್ಷುಕನ ಶವ..!
ಕೊರೋನಾ ನಿಯಮ ಬ್ರೇಕ್: 35 ಮಂದಿ ರೈತರ ಮೇಲೆ ಎಫ್.ಐ.ಆರ್.ದಾಖಲು..!