July 25, 2021

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ.

ಹಾವೇರಿ- ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಲು ಕಾರಣನಾದ ಹಾನಗಲ್ ತಾಲೂಕಿನ ಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ ರೂ.ಏಳು ಸಾವಿರ ದಂಡ ವಿಧಿಸಿ ಗುರುವಾರ ಹೆಚ್ಚುವರಿ ಜಿಲ್ಲಾ ವ ಸತ್ರ ಎಫ್.ಟಿ.ಎಸ್.ಸಿ.-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಕೆ.ಎಸ್.ಜ್ಯೋತಿಶ್ರೀ ಅವರು ತೀರ್ಪು ನೀಡಿದ್ದಾರೆ.

ಆರೋಪಿ ಸುನೀಲಗೌಡ ಮಹಾದೇವಗೌಡ ಪಾಟೀಲ ಈತನು ಅಪ್ರಾಪ್ತ ಬಾಕಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ ಅವಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ರೇವಪ್ಪ ಕಟ್ಟಿಮನಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 10 ವರ್ಷಗಳ ಕಠಿಣ ಸಜೆ ಹಾಗೂ ರೂ.ಏಳು ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಭಾದಿತಳಿಗೆ ರೂ.ಐದು ಲಕ್ಷ ಪರಿಹಾರ ನೀಡಲು ಆದೇಶಿಸಿ ತೀರ್ಪು ನೀಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಮಂಡಿಸಿದ ಹೆಚ್ಚುವರಿ ಜಿಲ್ಲಾ ವ ಸತ್ರ ಎಫ್.ಟಿ.ಎಸ್.ಸಿ (ಪೊಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ವಿನಾಯಕ ಎಸ್.ಪಾಟೀಲ ತಿಳಿಸಿದ್ದಾರೆ.

Share this News
error: Content is protected !!