July 25, 2021

ಇನೋವಾ ಕಾರು ಪಲ್ಟಿಯಾದರೂ ತಪ್ಪಿದ ದೊಡ್ಡ ಅನಾಹುತ..!

ಹಾವೇರಿ – ಇನೋವಾ ಕಾರ್ ಟೈರ್ ಬ್ಲಾಸ್ಟ್ ಆಗಿ ಚಲಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ಒಂಬತ್ತು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ, ಹಾವೇರಿಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಒಂಬತ್ತು ವರ್ಷದ ಬಾಲಕನ್ನ ಮೋಕ್ಷಿತ ‌ಎಂದು ಗುರುತಿಸಲಾಗಿದೆ. ಕಾಲಿಗೆ ಪೆಟ್ಟುಬಿದ್ದ ಗಾಯಗೊಂಡಿದ್ದಾನೆ. ಇನ್ನೂ ಕಾರಿನಲ್ಲಿದ್ದ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬೆಂಗಳೂರಿನಿಂದ ಧಾರವಾಡ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this News
error: Content is protected !!