July 25, 2021

ವ್ಯಾಕ್ಸಿನ್ ಪ್ರಕರಣ: ಜಿಲ್ಲಾ ಆರ್.ಸಿ.ಎಚ್ ಡಾ.ಜಯಾನಂದ್ ಗೆ ನೋಟಿಸ್. ‌ತಪ್ಪಿದ್ದಲ್ಲಿ ಕ್ರಮ ಕೈಗೊಳ್ಳಲು ಶಿಪಾರಸ್ಸು ಮಾಡುವುದಾಗಿ ಎಚ್ಚರಿಕೆ.

ಹಾವೇರಿ/ಬೆಂಗಳೂರು- ಕೃಷಿ ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲೇ ಕೋವಿಡ್ ವ್ಯಾಕ್ಸಿನ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ನೋಟಿಸ್ ನೀಡಿದ್ದಾರೆ.

ಹಾವೇರಿ ಜಿಲ್ಲಾ ಆರ್.ಸಿ.ಎಚ್‌ ಡಾ. ಜಯಾನಂದ್ ಗೆ ನೋಟಿಸ್ ನೀಡಲಾಗಿದೆ. ಕೋವಿಡ್ ಲಸಿಕೆಯನ್ನು ಕೇವಲ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಬೇಕು. ಈ ಬಗ್ಗೆ ಹಲವು ಸಭೆಗಳಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದರೂ‌ ಈ ಅವಾಂತರ ಹೇಗೆ ನಡೆಯಿತು ಎಂದು ನೋಟಿಸ್ ನಲ್ಲಿ ಪ್ರಶ್ನೆ ‌ಕೇಳಿದ್ದಾರೆ.

ಈ‌ ಘಟನೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಘನತೆಗೆ ಕುಂದು ಉಂಟಾಗಿದೆ. ಇದು ಅಧಿಕಾರಿಗಳ ನಿರ್ಲಕ್ಷ್ಯತನವಾಗಿದ್ದು ಆಕ್ಷೇಪಾರ್ಹವಾಗಿದೆ. ಈ ಪತ್ರ‌ ತಲುಪಿದ ಕೂಡಲೇ ಸಮಜಾಯಿಷಿ ನೀಡಿ ಎಂದು ಸೂಚನೆ ನೀಡಿದ್ದಾರೆ. ತಪ್ಪಿದ್ದಲ್ಲಿ ಕ್ರಮ ಕೈಗೊಳ್ಳಲು ಶಿಪಾರಸ್ಸು ಮಾಡುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

Share this News
error: Content is protected !!