July 25, 2021

ಅನಾರೋಗ್ಯದಿಂದ ಮೃತಪಟ್ಟಿದ್ದ ಹಿರಿಯ ಪತ್ರಕರ್ತ ಹೂಗಾರ ಕುಟುಂಬಕ್ಕೆ ಸಿಎಂ ನೆರವು

ಹಾವೇರಿ: ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ವರದಿಗಾರ ಗಂಗಾಧರ ಹೂಗಾರ ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ 5ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.

ಸಂಕಷ್ಟದಲ್ಲಿರುವ ಗಂಗಾಧರ ಹೂಗಾರ ಕುಟುಂಬಕ್ಕೆ ನೆರವು ನೀಡುವಂತೆ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ರಾಜ್ಯ ಸಂಘಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ಬಗ್ಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಮಾಡಿ, ಪರಿಹಾರ ಮಂಜೂರು ಮಾಡುವಂತೆ ಕೋರಿದ್ದರು.

ಸಂಕಷ್ಟದಲ್ಲಿದ್ದ ಪತ್ರಕರ್ತ ಹೂಗಾರ ಕುಟುಂಬಕ್ಕೆ 5ಲಕ್ಷ ರೂ., ಮಂಜೂರು ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಹಾಗೂ ಪರಿಹಾರ ಮಂಜೂರಾತಿಗೆ ಶ್ರಮಿಸಿದ ಸಂಘಟನೆಯ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ನಾಗರಾಜ ಕುರುವತ್ತೇರ, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ರಾಮು ಮುದಿಗೌಡ್ರ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ನಿಂಗಪ್ಪ ಚಾವಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Share this News
error: Content is protected !!