July 25, 2021

3ಲಕ್ಷ ರೂ.ಮೌಲ್ಯದ ಆಭರಣವನ್ನು ಬಸ್ಸಿನಲ್ಲಿಯೇ ಬಿಟ್ಟು ಇಳಿದ ಮಹಿಳೆ: ಮಾನವೀಯತೆ ಮೆರೆದ ಡ್ರೈವರ್, ಕಂಡಕ್ಟರ್..!

ಬಸ್ ನಲ್ಲಿ ಬಿಟ್ಟು ಹೋಗಿದ್ದ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಮಾಂಗಲ್ಯ ಸರವನ್ನು ವಾಪಸ್ಸ್ ನೀಡಿ ಚಾಲಕ ಮತ್ತು ನಿರ್ವಹಕ ಮಾನವೀಯತೆ ಮೆರೆದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಸ್ಲಿಪರ್ ಕೋಚ ಬಸ್ಸಿನಲ್ಲಿ ಬೆಂಗಳೂರು ನಿಂದ ಹೀರೆಕೆರೂರಿಗೆ ಪ್ರಯಾಣ ಮಾಡುವಾಗ ಹರಿಹರದ ಮಹಿಳೆಯೊಬ್ಬರು ಚಿನ್ನಾಭರಣವನ್ನ ಕಳೆದುಕೊಂಡಿದ್ದರು.
ಬಂಗಾರದ ಆಭರಣವಿರುವ ಪರ್ಸ್ ನ್ನು ಬಸ್ಸಿನಲ್ಲಿ ಬಿಟ್ಟು ಹರಿಹರದಲ್ಲಿ ಇಳಿದಿದ್ದರು.

ಹೀರೆಕೆರೂರಿನ ನಿಲ್ದಾಣಕ್ಕೆ ಬಸ್ ಬಂದಮೇಲೆ ಮಹಿಳೆ ಇದ್ದ ಸೀಟಿನಲ್ಲಿ ಪರ್ಸ್ ಇರುವುದನ್ನು ಗಮನಿಸಿದ ನಿರ್ವಾಹಕರಾದ ಬಿ.ಪಿ ಶೆಟ್ಟರ್, ಚಾಲಕ ಪ್ರಭು ಮರಿಗೌಡರ ರೊಂದಿಗೆ ಪರ್ಸಿನ ವಾರಸುದಾರರನ್ನು ಪತ್ತೆಹಚ್ಚಲು ಮುಂದಾದರು. ನಂತರ ಹೀರೆಕೆರೂರಿನ ಬಸ್ ನಿಲ್ದಾಣಕ್ಕೆ ಪರ್ಸಿನ್ ವಾರಸುದಾರರಾದ ಮಹಿಳೆಯನ್ನು ಕರೆಸಿ 50 ಗ್ರಾಂ ಚಿನ್ನದ 2.50 ಲಕ್ಷ ರೂಪಾಯಿ ಬೆಲೆ ಬಾಳುವ ಮಾಂಗಲ್ಯ ಸರವನ್ನು ವಾಪಸ್ ನೀಡಿದ್ದಾರೆ.‌ ಈ ಮೂಲಕ ಸಾಮಾಜಿಕ ಜವಬ್ದಾರಿಯೊಂದಿಗೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ.

ಚಾಲಕ ಮತ್ತು ನಿರ್ವಾಹಕರ ಕಾರ್ಯಕ್ಕೆ ಸ್ಥಳೀಯರು ಹಾಗೂ ಸಾರ್ವಜನಿಕರು ಸೇರಿದಂತೆ ಸಾರಿಗೆ ನೌಕರರ ಕಾರ್ಮಿಕ ಮುಖಂಡ ಜಿ.ಎಸ್. ದೊಡ್ಡಗೌಡರ ಬೇಷ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share this News
error: Content is protected !!