April 22, 2021

CRIME NEWS| ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಪೋಟಕ ಪತ್ತೆ..!

ಹಾವೇರಿ – ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಬಾಗದಲ್ಲಿ ಸ್ಪೋಟಕ ವಸ್ತುಗಳಾದ ಎಲೆಕ್ಟ್ರಿಕ್ ಜೆಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

ಸುರೇಶ್, ಶೌಕತ್ ಮತ್ತು ಧನರಾಜ್ ಎಂಬುವರು ಈ ಸ್ಪೋಟಕಗಳನ್ನು ಅಡಗಿಸಿಟ್ಟಿದ್ದರು. ಸಿ.ಇ.ಎನ್ ಕ್ರೈಂ ಪೊಲೀಸ ಠಾಣೆಯ ಸಿಪಿಐ ಸಂತೋಷ ಪವಾರ ದಾಳಿ ನಡೆಸಿದ್ದಾರೆ.
ಅಕ್ರಮ ಗಣಿಗಾರಿಕೆ ನಡೆಸಲು ಆರೋಪಿಗಳು ಈ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು‌.

ಈ ಕುರಿತಂತೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

____

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!