ಹಾವೇರಿ- ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಛತ್ರದ ಬಳಿ ನಡೆದಿದೆ. ಈ ವೇಳೆ ಚಾಲಕ ತನ್ನ ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾನೆ.
ಗದಗದಿಂದ ರಾಣೇಬೆನ್ನೂರುಗೆ ಹೊರಟಿದ್ದ ಬಸ್ ಛತ್ರದ ಬಳಿ ಬರುತ್ತಿದ್ದಂತೆ ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿದೆ.
ಈ ಸಂದರ್ಭದಲ್ಲಿ ತನ್ನ ಸಮಯ ಪ್ರಜ್ಞೆಯಿಂದ ಬಸ್ನ್ನು ರಸ್ತೆಯ ಬದಿಗೆ ಇಳಿಸಲು ಪ್ರಯತ್ನಿಸುತ್ತಿರುವಾಗ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ ಚಿಕ್ಕ್ ಮಕ್ಕಳು ಸೇರಿದಂತೆ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಬಸ್ ಪಲ್ಟಿಯಾಗಿದ್ದರಿಂದ ಕೆಲವು ಪ್ರಯಾಣಿಕರಿಗೆ ಗಂಬೀರ ಗಾಯಗಳಾಗಿವೆ. ಉಳಿದಂತೆ ಎಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಬಸ್ ನಿಯಂತ್ರಣ ತಪ್ಪಿದ ಕೂಡಲೇ ಬಸ್ಸಿನ ಬ್ರೇಕ್ ಫೇಲಾಗಿರುವುದನ್ನು ಮನಗಂಡ ಬಸ್ ಚಾಲಕ, ಬಸ್ನ್ನು ಅಪಾಯದಿಂದ ಪಾರು ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಸ್ ಪಲ್ಟಿಯಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರೆಲ್ಲರೂ ದೊಡ್ಡ ದುರಂತದಿಂದ ಪಾರಾಗಿದ್ದಾರೆ. ಚಿಕ್ಕ ಮಕ್ಳು ಸೇರಿದಂತೆ ಪ್ರಯಾಣಿಕರ ಜೀವ ಉಳಿಸಿದ ಅಪತ್ಭಾಂದವ ಚಾಲಕನಿಗೆ ನಮ್ಮದೊಂದು ಸಲಾಮ್..
_________
More Stories
ಜನತಾ ಕರ್ಫ್ಯೂ ಪಾಲನೆ ಮಾಡಿ, ಕೋವಿಡ್ ಚಿಕಿತ್ಸೆಗೆ ನ್ಯೂನ್ಯತೆಯಾಗದಂತೆ ಮುನ್ನೆಚ್ಚರಿಕೆ: ಶಿಗ್ಗಾಂವ-ಸವಣೂರ ಆಸ್ಪತ್ರೆಗೆ ಡಿಸಿ ಭೇಟಿ ಪರಿಶೀಲನೆ..!
ಕೊರೋನಾ ಎರಡನೇಯ ಅಲೆಯ ಭಯ: ಮಾನವೀಯತೆ ಮರೆತ ಜನ, ಅನಾಥವಾಗಿ ಬಿದ್ದ ಬಿಕ್ಷುಕನ ಶವ..!
ಕೊರೋನಾ ನಿಯಮ ಬ್ರೇಕ್: 35 ಮಂದಿ ರೈತರ ಮೇಲೆ ಎಫ್.ಐ.ಆರ್.ದಾಖಲು..!