April 22, 2021

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 12 ವರ್ಷ ಕಠಿಣ ಶಿಕ್ಷೆ.

ಹಾವೇರಿ – ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಹನುಮಂತಪ್ಪ ಚಂದ್ರಪ್ಪ ಯಣ್ಣಿಕೊಪ್ಪ ಆರೋಪಿಗೆ 12 ವರ್ಷಗಳ ಕಠಿಣ ಸಜೆ ಹಾಗೂ ಎಂಟು ಸಾವಿರ ರೂ. ದಂಡ ವಿಧಸಿ ಜಿಲ್ಲಾ ಸತ್ರ ಎಫ್.ಟಿ.ಎಸ್.ಸಿ-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಕೆ.ಎಸ್. ಜ್ಯೋತಿಶ್ರೀ ಅವರು ತೀರ್ಪು ನೀಡಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ಹಾನಗಲ್ ತಾಲೂಕು ಬೈಚವಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ 2018 ರಂದು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣ ಕುರಿತಂತೆ ಹಾನಗಲ್ ಆರಕ್ಷಕ ವೃತ್ತ ನಿರೀಕ್ಷಕರಾದ ಆರ್.ಎಚ್.ಕಟ್ಟಿಮನಿ ಅವರು ತನಿಖೆ ನಡೆಸಿ ಆರೋಪಿತನ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸದರಿ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆದು ದೋಷಾರೋಪಗಳು ರುಜುವಾತಾದ ಕಾರಣ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಹನುಮಂತಪ್ಪ ಚಂದ್ರಪ್ಪ ಯಣ್ಣಿಕೊಪ್ಪ ಎಂಬಾತನಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಎಂಟು ಸಾವಿರ ರೂ. ದಂಡ ಹಾಗೂ ಭಾದಿತೆಗೆ ಎರಡು ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಧೀಶರು ತೀರ್ಪು ನೀಡಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಹೆಚ್ಚುವರಿ ಜಿಲ್ಲಾ ವ ಸತ್ರ ಎಫ್.ಟಿ.ಎಸ್.ಸಿ-1(ಪೊಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ವಿನಾಯಕ ಎಸ್.‌ಪಾಟೀಲ ವಾದ ಮಂಡನೆ ಮಾಡಿದ್ದಾರೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!