April 22, 2021

ಹಿಂಬಾಗಿಲು ಬೀಗ ಮುರಿದು ಪೋಲಿಸಪ್ಪನ ಮನೆ ಕಳ್ಳತನ

ಹಾವೇರಿ – ಮನೆಯ ಹಿಂಬಾಗಿಲು ಬೀಗ‌ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ಶ್ರೀಕಂಠಪ್ಪ ಬಡಾವಣೆಯಲ್ಲಿ ನಡೆದಿದೆ.

ನಗರದ ಅಂತೋನಿ ಡಿಸೋಜಾ ಹಾವೇರಿ ಸಶಸ್ತ್ರ ಮೀಸಲು ಪಡೆಯ ಎಸ್.ಆರ್.ಎಸ್.ಐ ಕೆಲಸ ಮಾಡುತ್ತಿದ್ದ ಪೊಲೀಸ್ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಹಿಂಬಾಗಿಲು ಬೀಗ ಮುರಿದು ಟ್ರಜರಿಯಲ್ಲಿ ಎರಡು ಲಕ್ಷ ರುಪಾಯಿ ಮೌಲ್ಯದ ಚಿನ್ನಭರಣ ಹಾಗೂ 20 ಸಾವಿರ ರುಪಾಯಿ ಕಳ್ಳತನ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

____

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!