March 7, 2021

ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳಿಗೆ ಯೋಜನೆಗಳ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ- ಜಿ.ಪಂ. ಸಿಇಓ ಮಹಮ್ಮದ್ ರೋಷನ್

ಹಾವೇರಿ:ಜಿಲ್ಲೆಯಲ್ಲಿ ಬಿಡುಗಡೆಗೊಂಡ ಜೀತದಾಳುಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಪುನರ್ವಸತಿಗಾಗಿ ವಾರ್ಷಿಕ ನಿಗಧಿತ ಗುರಿಗಿಂತ ಅಧಿಕ ಸೌಲಭ್ಯ ನೀಡಲು ಕೇಂದ್ರ ಕಚೇರಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ರೋಷನ್ ಅವರು ಕರೆ ನೀಡಿದರು.

ಇದನ್ನೂ ಓದಿ  ಬಿಪಿಎಲ್ ಪಡಿತರ ಚೀಟಿ ಹಿಂತಿರುಗಿಸಿ, ಇಲ್ಲಾಂದ್ರೆ ಕ್ರಿಮಿನಲ್ ಕೇಸ್.!?

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜಿಲ್ಲೆಯಲ್ಲಿ ಬಿಡುಗಡೆಗೊಂಡ ಜೀತದಾಳುಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಗುರುತಿಸಲ್ಪಟ್ಟಿರುವ ಅರ್ಹ ಮ್ಯಾನ್ಯಯಲ್ ಸ್ಕ್ಯಾವೆಂಜರ್‍ಗಳಿಗೆ ಪುರ್ವವಸತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ  ನಿಲ್ದಾಣದಲ್ಲಿಯೇ ಬಸ್ ಅಡ್ಡಗಟ್ಟಿದ ವಿಧ್ಯಾರ್ಥಿಗಳು.. ಕಾರಣವೇನು..!?

ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಕಲ್ಪಿಸುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ 56 ಜನ ಮ್ಯಾನ್ಯಯಲ್ ಸ್ಕ್ಯಾವೆಂಜರ್‍ಗಳನ್ನು ಗುರುತಿಸಲಾಗಿದೆ. ಸೌಲಭ್ಯ ಕಲ್ಪಿಸಲು ಬೇಕಾದ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸೌಲಭ್ಯಗಳನ್ನು ವಿತರಣೆಮಾಡಲಾಗುವುದು ಎಂದು ಹೇಳಿದರು.

ಪ್ರತಿಯೊಬ್ಬ ಬಿಡುಗಡೆಗೊಂಡ ಜೀತದಾಳುಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳು ತಮಗಿರುವ ಸರ್ಕಾರದ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತಂತೆ ಮಾಹಿತಿ ಪಡೆದುಕೊಳ್ಳಬೇಕು. ಯೋಜನೆಗಳ ಬದಲಾವಣೆ ಕುರಿತಂತೆ ತಿಳಿದುಕೊಳ್ಳುವುದು ಅವಶ್ಯವಾಗಿದೆ. ಈ ಬಗ್ಗೆ ಮಾಹಿತಿ ಇಲ್ಲದಿದ್ದರೆ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಸಲಹೆ ನೀಡಿದರು.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!