July 25, 2021

ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ: ಯಲವಿಗಿ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ…!

ಹಾವೇರಿ:ಪ್ರತಿಯೊಂದು ಗ್ರಾಮದಲ್ಲಿಯೂ ಕೂಡ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲರೂ ಜವಾಬ್ದಾರಿಯುತವಾಗಿ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿವಹಿಸಬೇಕು ಅಲ್ಲದೇ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೇಕಾರ ಹೇಳಿದರು.

ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ನೂತನ ಘಟಕಕ್ಕೆ ಚಾಲನೆ ನೀಡಿದ ಅವರು, ಸ್ವಚ್ಛ ಭಾರತ ಮಿಷನ್ ಅಭಿಯಾನದ ಅಡಿಯಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಅಭಿಯಾನ ಯಶಸ್ವಿಯಾಗಬೇಕಾದರೇ ಸಾರ್ವಜನಿಕರ ಸಹಭಾಗಿತ್ವ ಕೂಡ ಅವಶ್ಯಕತೆ ಇದೆ. ಅಲ್ಲದೆ ಜನರು ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯುವ ಬದಲು ಸ್ವಚ್ಚತೆಗೆ ಒತ್ತನ್ನು ನೀಡಬೇಕು ಎಂದು ಅವರು ಸಲಹೆ ನೀಡಿದರು.

ಇನ್ನೂ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡ ಅರ್ಹ ಪಲಾನುಭವಿಗಳಿಗೆ ಶಾಸಕರು ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಿದರು.ಅಲ್ಲದೇ ಇದೇ ವೇಳೆ ನೂತನ ಅಂಗನವಾಡಿ ಕಟ್ಟಡ ಹಾಗೂ ಯಲವಿಗಿ ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

Share this News
error: Content is protected !!