governament Government Scheme scheme.

SC,ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

SC,ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31, 2022 ರವರೆಗೆ ಅವಕಾಶ ನೀಡಲಾಗಿತ್ತು.

ಆದರೆ ಈಗ ಈ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, 2022-23ನೇ ಸಾಲಿನ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ 28-02-2023 ರವರೆಗೆ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು ಅರ್ಜಿ ಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ.

ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌

Click here

ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

√.ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌  ಗೆ ಭೇಟಿ ನೀಡಿ.

√.ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

√.ಅಂಕಪಟ್ಟಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ, ಫೋಟೋಗಳನ್ನು ಅಪ್‌ ಲೋಡ್‌ ಮಾಡಿ.

√.ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಕೋರ್ಸ್‌ ಅನುಸಾರ ಪ್ರೋತ್ಸಾಹಧನದ ವಿವರ

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ – 20,000

ಪದವಿ ವಿದ್ಯಾರ್ಥಿಗಳಿಗೆ – 25,000

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – 30,000

ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – 35,000

LEAVE A RESPONSE

Your email address will not be published. Required fields are marked *